Published
2 hours agoon
By
Akkare News
ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ (Lt Gen Dhiraj Seth) ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸೇನೆಯ ಹಾಲಿ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರ ನಿವೃತ್ತಿಯ ಬಳಿಕ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶನಿವಾರ ಕೇಂದ್ರ ಸರ್ಕಾರ ಹೇಳಿದೆ.
ಅಷ್ಟೇ ಅಲ್ಲ ಮರುಭೂಮಿ ವಲಯದಲ್ಲಿ ಆರ್ಮರ್ಡ್ ರೆಜಿಮೆಂಟ್ ಕಮಾಂಡರ್ ಆಗಿ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ದಂಗೆ ನಿಗ್ರಹ ಗ್ರಿಡ್‌ನ ಭಾಗವಾದ ಯೂನಿಫಾರ್ಮ್ ಫೋರ್ಸ್ ಕಮಾಂಡರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಆಗಿ ಬಡ್ತಿ ಪಡೆದ ನಂತರ, ಅವರು 21ನೇ ಸ್ಟ್ರೈಕ್ ಕಾರ್ಪ್ಸ್‌ಗೆ ಕಮಾಂಡರ್ ಆಗಿ ಮತ್ತು ನಂತರ ದೆಹಲಿ ಪ್ರದೇಶದ ಜನರಲ್ ಕಮಾಂಡಿಂಗ್ ಆಫೀಸರ್ ಕಮಾಂಡಿಂಗ್ ಆಗಿ ಸೇವೆ ಮಾಡಿದ್ದಾರೆ. ಸೇನಾ ಕಮಾಂಡರ್ ಹುದ್ದೆಗೆ ಬಡ್ತಿ ಪಡೆದ ನಂತರ, ಅವರು ಸೌತ್ ವೆಸ್ಟರ್ನ್ ಕಮಾಂಡ್ ಮತ್ತು ಸದರ್ನ್ ಕಮಾಂಡ್‌ನಲ್ಲಿ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕೆಲಸ ನಿರ್ವಹಿಸಿದ್ದಾರೆ.