Published
3 hours agoon
By
Akkare News
ಬೆಳ್ತಂಗಡಿ: ಸ್ಥಳೀಯ ಪತ್ರಿಕೋದ್ಯಮವನ್ನು ಇನ್ನಷ್ಟು ಬಲಗೊಳಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಯ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘದ ಮುಂದಿನ ಒಂದು ವರ್ಷದ ಅವಧಿಗೆ ಎಲ್ಲಾ ಹುದ್ದೆಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಇದು ಬೆಳ್ತಂಗಡಿ ತಾಲೂಕಿನ ಪತ್ರಕರ್ತರ ಒಗ್ಗಟ್ಟಿಗೆ ಸಾಕ್ಷಿಯಾಗಿದೆ.