Published
2 hours agoon
By
Akkare News
ಪುತ್ತೂರು: ವಿಟ್ಲಬ್ಲಾಕ್ ನ ಕುಡಿಪ್ಪಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕಾಂಗ್ರೆಸ್ ಮುಖಂಡ ಅರ್ಕ ರಾಧಾಕೃಷ್ಣಪೂಜಾರಿಯವರ ಮನೆಯಲ್ಲಿ ನಡೆಯಿತು. ಶಾಸಕ ಅಶೋಕ್ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ವಲಯ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಧೀರಜ್ ಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಿಕಟಪೂರ್ವ ಅಧ್ಯಕ್ಷರಾಗಿದ್ದ ಕೇಶವ ಅವರನ್ನು ಬ್ಲಾಕ್ ಉಪಾಧ್ಯಕ್ಷರನ್ನಾಗಿಯೂ ನೇಮಕ ಮಾಡಲಾಯಿತು. ಸಭೆಯಲ್ಲಿ ಶಾಸಕರು ಪಕ್ಷ ಸಂಘಟನೆ ಮಾಡುವ ಬಗ್ಗೆ ಮಾತನಾಡಿದರು.





