Published
2 hours agoon
By
Akkare News
ಬೆಂಗಳೂರು: ತಮ್ಮ ವಿಲಕ್ಷಣ ಹಾಗೂ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಪ್ರೊ. ಕೆ.ಎಸ್.ಭಗವಾನ್ ಅವರು ಮತ್ತೊಮ್ಮೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶ್ರೀರಾಮನ ಜನನದ ಕುರಿತು ಅವರು ನೀಡಿರುವ ಆಕ್ಷೇಪಾರ್ಹ ಹೇಳಿಕೆ ಈಗ ರಾಜ್ಯಾದ್ಯಂತ ಭಾರಿ ಕಿಡಿ ಹೊತ್ತಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ, ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಎಸ್.ಉಗ್ರಪ್ಪ ಅವರು ಭಗವಾನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹರಿಹರದಲ್ಲಿ ಪ್ರಕರಣ ದಾಖಲು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರೊ. ಕೆ.ಎಸ್.ಭಗವಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಹರಿಹರದ ಪ್ರೊ. ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಭಗವಾನ್, ರಾಮಾಯಣ ಹಾಗೂ ಶ್ರೀರಾಮನ ಜನ್ಮ ವೃತ್ತಾಂತವನ್ನು ಅತ್ಯಂತ ಅವಹೇಳನಕಾರಿ ಪದಗಳಲ್ಲಿ ಟೀಕಿಸಿದ್ದರು. ಪುತ್ರಕಾಮೇಷ್ಟಿ ಯಾಗ ಮತ್ತು ದಶರಥ ಮಹಾರಾಜನ ರಾಣಿಯರ ಕುರಿತು ಅವರು ಆಡಿದ್ದ ಮಾತುಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.