Published
3 hours agoon
By
Akkare News
ಪುತ್ತೂರು: ಮೆಸ್ಕಾಂನ 3 ಜಿಲ್ಲೆ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆಯನ್ನು ಕರ್ನಾಟಕದಲ್ಲಿ ಖಾಸಗೀಕರಣಗೊಳಿಸುವುದರ ವಿರುದ್ಧ ಜೂ.16ರಂದು ಬನ್ನೂರಿನಲ್ಲಿರುವ ಮೆಸ್ಕಾಂನ ಪುತ್ತೂರು ವಿಭಾಗದ ಕಚೇರಿಯಲ್ಲಿ ಮೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಈಗಾಗಲೇ ಕರ್ನಾಟಕದಲ್ಲಿ ಪ್ರಾರಂಭಗೊಂಡಿದೆ. ಟಾಟಾ ಕಂಪನಿಯವರು ಖಾಸಗಿಗೆ ಅರ್ಜಿ ಹಾಕಿದ್ದಾರೆ. ಖಾಸಗಿಯವರಿಗೆ ನೀಡಬೇಕಾದರೆ ಕರ್ನಾಟಕ ವಿದ್ಯುತ್ಚಕ್ತಿ ನಿಯಂತ್ರಣ ಆಯೋಗ ಸಾರ್ವಜನಿಕರ ಅಭಿಪ್ರಾಯ, ಆಕ್ಷೇಪಣೆಗಳನ್ನು ಪಡೆಯಬೇಕು. ಆಕ್ಷೇಪಣೆಗಳನ್ನು ಸಲ್ಲಿಸಲು ಜೂ.23ರ ತನಕ ಅವಕಾಶವಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಖಾಸಗೀಕರಣಗೊಂಡರೆ ಕೃಷಿ, ಕೈಗಾರಿಕೆ, ಗುತ್ತಿಗೆದಾರರು ಸಹಿತ ಎಲ್ಲಾ ವರ್ಗದವರಿಗೂ ಪರಿಣಾಮ ಬೀಳಲಿದೆ. ಹೀಗಾಗಿ ಪ್ರತಿಯೊಬ್ಬ ನಾಗರೀಕರು ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಖಾಸಗೀಕರಣದಿಂದ ಸಂಭವಿಸಬಹುದಾದ ಹೊಡೆತ, ಸಮಸ್ಯೆಗಳನ್ನು ತಡೆಯುವಂತೆ ಪ್ರತಿಭಟನೆಯಲ್ಲಿ ಆಗ್ರಹ ವ್ಯಕ್ತವಾಯಿತು.
ವಿದ್ಯುತ್ ಇಲಾಖೆ ಖಾಸಗೀಕರಣದಿಂದ ಇಲಾಖೆಗೆ ಮಾತ್ರ ಸಂಕಷ್ಟವಲ್ಲ. ರೈತರು, ಗ್ರಾಹಕರು, ಗುತ್ತಿಗೆದಾರರು, ಕೈಗಾರಿಕೋದ್ಯಮಿಗಳಿಗೂ ದೊಡ್ಡ ಮಟ್ಟದ ಹೊಡೆತ ಬೀಳಲಿದೆ. ಗೃಹ ಜ್ಯೋತಿಯಂತಹ ಉಚಿತ ವಿದ್ಯುತ್ ಯೋಜನೆ, ಪಂಪ್ಸೆಟ್ಗಳಿಗೆ ರಿಯಾಯಿತಿ ಸಹಿತ ಎಲ್ಲಾ ರಿಯಾಯಿತಿಗಳಿಗೂ ಹೊಡೆತ ಬೀಳಲಿದೆ. ನಾವು ಇಲಾಖೆಯ ಒಳಗಡೇ ಇರುವುದರಿಂದ ನಮಗೆ ಇದರ ಸುಳಿವು ದೊರೆತಿದ್ದು ಆಕ್ಷೇಪಣೆ ಪ್ರಾರಂಭಿಸಿದ್ದೇವೆ. ಸಾರ್ವಜನಿಕರು, ರೈತರು, ಕೈಕಾರಿಕೋದ್ಯಮಿಗಳು, ಗುತ್ತಿಗೆದಾರರು ಸಹಿತ ಪ್ರತಿಯೊಬ್ಬರೂ ಆಕ್ಷೇಪಣೆ ಸಲ್ಲಿಸುವ ಮೂಲಕ ಖಾಸಗೀಕರಣ ಎಂಬ ಪ್ರಕ್ರೀಯೆ ಕರ್ನಾಟಕ ರಾಜ್ಯದೊಳಗೆ ಪ್ರವೇಶಿಸದಂತೆ ಮುಂಜಾಗ್ರತೆ ವಹಿಸಬೇಕು. -ರಾಮಚಂದ್ರ, ಕಾರ್ಯನಿರ್ವಾಹಕ ಇಂಜಿನಿಯರ್, ರಾಜ್ಯಾಧ್ಯಕ್ಷರು ಡಿಪ್ಲೋಮ ಇಂಜಿನಿಯರ್ಸ್ ಎಸೋಸಿಯೇಶನ್ 




