Published
2 hours agoon
By
Akkare News
ಸೈಮನ್ ಮತ್ತು ಅವರ ತಂಡ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯ ವಿವರ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖಾಧಿಕಾರಿಯಾಗಿರುವ ಚಿಕ್ಕಮಗಳೂರು ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್ ಅವರು ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಲು ಅಧಿಕಾರಿಗಳ ತಂಡ ಪ್ರಯಾಣಿಸುತ್ತಿತ್ತು. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ತಲುಪಿದಾಗ, ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ.
ದಕ್ಷಿಣ ಕನ್ನಡ (ಜೂ.16): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ (ಚಾರ್ಮಾಡಿ ಘಾಟ್ ) ಮಂಗಳವಾರ ಮಹತ್ವದ ತನಿಖಾ ತಂಡವೊಂದರ ಕಾರು ಭೀಕರ ಅಪಘಾತಕ್ಕೆ ಈಡಾಗಿದೆ. ಧರ್ಮಸ್ಥಳದ ವಿವಾದಾತ್ಮಕ ‘ಬುರುಡೆ ಪ್ರಕರಣ’ದ (ಧರ್ಮಸ್ಥಳ ಬುರುಡೆ ಕೇಸ್ ) ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಎಸ್‌ಪಿ ಸಿ.ಎ.