Published
2 hours agoon
By
Akkare News
ಸಾವಿರಾರು ಕೋಟಿ ರೂ. ಪ್ರಕರಣದಲ್ಲಿ ಬಂಧನವಾಗಿದ್ದ ಶಿವಾನಂದ ನೀಲಣ್ಣವರ್ ಅವರಿಗೆ ಜಾಮೀನು ಮಂಜುರಾಗಿದ್ದು, ಇಂದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು. ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದೆ.
ನ್ಯಾಯಾಲಯ ಜಾಮೀನಿಗೆ ಹಲವು ಷರತ್ತುಗಳನ್ನು ವಿಧಿಸಿದ್ದು, ಜೂನ್ 27ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೆ ಮೂರು ಲಕ್ಷ ರೂಪಾಯಿ ಬಾಂಡ್ ಶೂರಿಟಿ, ಓರ್ವ ಜಾಮೀನುದಾರರನ್ನು ಒದಗಿಸುವುದು, ತನಿಖಾಧಿಕಾರಿಗೆ ಸಹಕರಿಸುವುದು ಹಾಗೂ ದೇಶ ತೊರೆಯಬಾರದು ಎಂಬ ಷರತ್ತುಗಳನ್ನು ವಿಧಿಸಿ ಮಧ್ಯಂತರ ಜಾಮೀನು ನೀಡಲಾಗಿದೆ.





