Published
6 hours agoon
By
Akkare News
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ಜಿಲ್ಲೆಯ ಮೊದಲ ಸರಕಾರಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಜತೆ ಶಾಸಕ ಅಶೋಕ್ ರೈ ಸಮನ್ವಯ ಸಭೆ ನಡೆಸಿದರು.

ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪುತ್ತೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನೋಡೆಲ್ ಅ ಕಾರಿಯಾಗಿರುವ, ರಾಜೀವ್ ಗಾಂಧಿ ಆರೋಗ್ಯ ವಿ.ವಿ. ನಿರ್ದೇಶಕ ಲೋಹಿತ್ ಉಪಸ್ಥಿತರಿದ್ದರು.

ಪುತ್ತೂರು ನಗರಕ್ಕೆ ನೀರು ಪೂರೈಸುತ್ತಿರುವ ಜಲಸಿರಿ ಯೋಜನೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ಪರಿಶೀಲಿಸಲು ಸೂಚಿಸಲಾಯಿತು. ಶಾಸಕರು ಮಾತನಾಡಿ, ಪುತ್ತೂರು- ಉಪ್ಪಿನಂಗಡಿ ನಡುವಿನ ಕಟಾರದಲ್ಲಿ ಕುಮಾರಧಾರಾ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು, ಬಳಿಕ ಅಲ್ಲಿಂದ ನೀರು ಪೂರೈಸಲು ಸಾಧ್ಯವಿದೆ ಎಂದರು. ಮೆಡಿಕಲ್ ಕಾಲೇಜ್, ಆಸ್ಪತ್ರೆ, ಹಾಸ್ಟೆಲ್, ವಸತಿ ನಿಲಯಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಹೊಸದಾಗಿ ಎಕ್ಸ್ ಪ್ರೆಸ್ ಫೀಡರ್ ಸ್ಥಾಪನೆ ಸಂಬಧ ಮೆಸ್ಕಾಂಗೆ ಸೂಚನೆ ನೀಡಲಾಯಿತು. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನಿರ್ಮಾಣವಾಗಲಿರುವ ಸೇಡಿಯಾಪುವಿನ 40 ಎಕರೆ ಜಾಗದಲ್ಲಿ ಅರಣ್ಯ ಜಮೀನು ಕೂಡ ಇರುವ ಕಾರಣ ಮರಗಳ ತೆರವು ವಿಚಾರದಲ್ಲಿ ಚರ್ಚೆ ನಡೆಯಿತು. ಅಗತ್ಯವಿರುವಷ್ಟು ಮರಗಳನ್ನಷ್ಟೇ ಕತ್ತರಿಸಬೇಕು. ಉಳಿದ ಕಾಡು ಹಾಗೇ ಇರಲಿ ಎಂದು ಶಾಸಕರು ತಿಳಿಸಿದರು. ಆಪ್ಟಿಕ್ ಪೈಬರ್ ಕೇಬಲ್ ಲೈನ್ ಅಳವಡಿಸುವ ವಿಚಾರದಲ್ಲಿ ಬಿಎಸ್ಸೆನ್ನೆಲ್ ಸಂಸ್ಥೆಗೆ ಬರೆಯಲು ನಿರ್ಧರಿಸಲಾಯಿತು. ನ್ಯಾಶನಲ್ ಮೆಡಿಕಲ್ ಕಮಿಶನ್ ಮಾನದಂಡಗಳ ಪ್ರಕಾರ ಹಾಲಿ ತಾಲೂಕು ಸರಕಾರಿ ಆಸ್ಪತ್ರೆಯನ್ನು ನವೀಕರಿಸಲು, ಆಸ್ಪತ್ರೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ತಾಲೂಕಿನಲ್ಲಿ 1 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಒಂದು ನಗರ ಆರೋಗ್ಯ ಕೇಂದ್ರವನ್ನು ಪ್ರತ್ಯೇಕವಾಗಿ ಗುರುತಿಸಲಾಗುತ್ತದೆ ಎಂದು ತಿಳಿಸಲಾಯಿತು. 

ಸಭೆಯಲ್ಲಿ ತಾಲೂಕು ಆರೋಗ್ಯ ಅ ಕಾರಿ ಡಾ.ದೀಪಕ್ ರೈ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ ರೈ, ವಲಯ ಅರಣ್ಯ ಅಧಿಕಾರಿ ಕಿರಣ್ ಬಿ.ಎಂ., ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಎ., ನಗರ ಯೋಜನಾ ಪ್ರಾ ಕಾರದ ಸದಸ್ಯ ನಿಹಾಲ್ ಶೆಟ್ಟಿ, ಜಲಸಿರಿ ಯೋಜನೆ ಅ ಕಾರಿಗಳು ಉಪಸ್ಥಿತರಿದ್ದರು.


