Published
5 hours agoon
By
Akkare News
ಪುತ್ತೂರು: ಮೈಸೂರಿನಲ್ಲಿ ನಡೆಯುವ ವಿಶ್ವಪ್ರಸಿದ್ದ ದಸರಾಗೆ ಈ ಬಾರಿ ಕಂಬಳ ನಡೆಸುವಂತೆ ಮತ್ತು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳ ವ್ಯವಸ್ಥೆ ಮಾಡುವಂತೆ ಶಾಸಕ ಅಶೋಕ್ ರೈ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಮೈಸೂರಿನ ಜಯಲಕ್ಷ್ಮೀ ಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ ಇರುವ ಸುಮಾರು 17 ಎಕ್ರೆ ಜಾಗದಲ್ಲಿ ಕಂಬಳ ನಡೆಯಲಿದೆ. ಅಕ್ಟೋಬರ್ ತಿಂಗಳ 18,19 ರಂದು ಎರಡು ದಿನ ಕಂಬಳ ನಡೆಯಲಿದೆ.
ಮೈಸೂರಿನಲ್ಲಿ ಸಭೆ ಇಂದು ಕಂಬಳ ನಡೆಸುವ ಬಗ್ಗೆ ಸಿ ಎಂ ಸೂಚನೆಯಂತೆ ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲೆಯ ಕಂಬಳ ಪ್ರಮುಖರು ಭಾಗವಹಿಸಿದ್ದರು. ಎರಡನೇ ಹಂತದ ಸಭೆ ಮುಂದಿನ ಗುರುವಾರ ಮೈಸೂರಿನಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸಹಿತ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ.