Published
15 hours agoon
By
Akkare News
ಕರ್ನಾಟಕ ಕಾಂಗ್ರೆಸ್ನಲ್ಲಿ ಹೊಸ ನಾಯಕತ್ವಕ್ಕೆ ಚಾಲನೆ ಸಿಗಲಿದ್ದು, ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಸಂಘಟನಾ ಅಧ್ಯಾಯ ಆರಂಭವಾಗಲಿದೆ.

ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ನೂರಾರು ಗಣ್ಯರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.






