Connect with us

ಕ್ರೈಮ್ ನ್ಯೂಸ್

ಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯ

Published

on

​ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ನಡೆದಿದೆ.

ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್ತಿ (32) ಮೃತ ಮಹಿಳೆ. ಆರ್ತಿ ಪತಿ ವಿಕ್ಕಿ ಕೂಡ ಗಂಭೀರ ಗಾಯಗೊಂಡಿದ್ದು, ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಮಧ್ಯಾಹ್ನ ಸುಮಾರು 2:50ರ ವೇಳೆಗೆ ಬಿಂದಾಪುರ ಪೊಲೀಸ್ ಠಾಣೆಗೆ ಕರೆ ಬಂದಿದ್ದು, ಎರಡು-ಮೂರು ಯುವಕರು ನನ್ನ ಮಗಳು ಮತ್ತು ಅಳಿಯನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಆರ್ತಿ ಪೋಷಕರು ಮಾಹಿತಿ ನೀಡಿದ್ದರು. ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಗಾಯಾಳುಗಳನ್ನು ದೀನದಯಾಳ ಉಪಾಧ್ಯಾಯ (ಡಿಡಿಯು) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಆರ್ತಿಯನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು.

 

ಗಂಭೀರವಾಗಿ ಗಾಯಗೊಂಡಿದ್ದ ವಿಕ್ಕಿಯನ್ನು ಹೆಚ್ಚಿನ ಚಿಕಿತ್ಸೆಗೆ ಸಫ್ದರ್‌ಜಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆಯಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ದಂಪತಿ ಮತ್ತು ನೆರೆಹೊರೆಯವರ ನಡುವೆ ವಾಗ್ವಾದ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಾಗ್ವಾದ ತೀವ್ರ ಸ್ವರೂಪ ಪಡೆದು, ಆರೋಪಿಗಳು ಚಾಕುವಿನಿಂದ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

​ ಪ್ರಕರಣದ ಸಂಬಂಧ 40 ವರ್ಷದ ಪಪ್ಪುವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಅಪ್ರಾಪ್ತ ಎಸ್ಕೇಪ್ ಆಗಿದ್ದಾನೆ. ಸದ್ಯ ಅಪ್ರಾಪ್ತನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಬಿಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement