Connect with us

ಇತರ

ಕೊಂಬೆಟ್ಟು ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

Published

on

​ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಕಾರ್ಯಕ್ರಮವು ದಿನಾಂಕ 21.06.2026 ರ ಆದಿತ್ಯವಾರದಂದು ನಡೆಯಿತು. ಶಾಲಾ ಪ್ರಭಾರ ಉಪಪ್ರಾಂಶುಪಾಲರಾದ ನಾಗರಾಜ್ ಭಟ್ ಇವರು ಯೋಗದ ಮಹತ್ವವನ್ನು ತಿಳಿಸುವುದರೊಂದಿಗೆ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಗೀತಾಂಜಲಿ ಹಾಗೂ ಶಾಲಾ ಎಸ್ ಸಿಸಿ ಘಟಕದ ಮಾರ್ಗದರ್ಶಿ ಶಿಕ್ಷಕರಾದ ಗ್ರೆಗೊರಿ ರೋನಿ ಪಾಯಸ್ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಯೋಗ ದಿನಾಚರಣೆಯ ನಿಮಿತ್ತ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ ರಾವ್, ನಿವೃತ್ತ ಉಪಪ್ರಾಂಶುಪಾಲರಾದ ವಸಂತ ಮೂಲ್ಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ದಿನಾಂಕ 20.06.2026 ರ ಶನಿವಾರದಂದು ಇಲಾಖಾ ನಿರ್ದೇಶನದಂತೆ ವಿದ್ಯಾರ್ಥಿಗಳಿಗೆ ಬ್ಯಾಗ್ ರಹಿತ ದಿನವಾಗಿ ಶಾಲೆಯಲ್ಲಿ ಸಂಭ್ರಮ ಶನಿವಾರವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಮಾಜದ ವಿಶೇಷ ಅಗತ್ಯವುಳ್ಳ ವ್ಯಕ್ತಿಗಳ ಬಗೆಗೆ ಹಾಗೂ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿಶೇಷ ಅಗತ್ಯವುಳ್ಳ ಮಕ್ಕಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಂದ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅವಕಾಶಗಳನ್ನು ನೀಡಿದಾಗ ಅವರು ಹೇಗೆ ಸಾಧಕರಾಗುತ್ತಾರೆ ಮತ್ತು ಶಾಲಾ ತರಗತಿ ಸನ್ನಿವೇಶಗಳಲ್ಲಿ ಸಮನ್ವಯ ಶಿಕ್ಷಣದ ಅವಶ್ಯಕತೆ ಹಾಗೂ ಶಿಕ್ಷಣದ ವ್ಯವಸ್ಥೆ ಹೇಗಿರಬೇಕು ಎಂಬುದನ್ನು ಈ ನಾಟಕದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಶಾಲಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಬೀದಿನಾಟಕವನ್ನು ಪ್ರದರ್ಶಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version