Published
4 hours agoon
By
Akkare News
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಕಾರ್ಯಕ್ರಮವು ದಿನಾಂಕ 21.06.2026 ರ ಆದಿತ್ಯವಾರದಂದು ನಡೆಯಿತು. ಶಾಲಾ ಪ್ರಭಾರ ಉಪಪ್ರಾಂಶುಪಾಲರಾದ ನಾಗರಾಜ್ ಭಟ್ ಇವರು ಯೋಗದ ಮಹತ್ವವನ್ನು ತಿಳಿಸುವುದರೊಂದಿಗೆ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಗೀತಾಂಜಲಿ ಹಾಗೂ ಶಾಲಾ ಎಸ್ ಸಿಸಿ ಘಟಕದ ಮಾರ್ಗದರ್ಶಿ ಶಿಕ್ಷಕರಾದ ಗ್ರೆಗೊರಿ ರೋನಿ ಪಾಯಸ್ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಯೋಗ ದಿನಾಚರಣೆಯ ನಿಮಿತ್ತ ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ ರಾವ್, ನಿವೃತ್ತ ಉಪಪ್ರಾಂಶುಪಾಲರಾದ ವಸಂತ ಮೂಲ್ಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಶಾಲಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಬೀದಿನಾಟಕವನ್ನು ಪ್ರದರ್ಶಿಸಿದರು.





