Connect with us

ಇತರ

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ – 6 ಕಡೆ ಏಕಕಾಲದಲ್ಲಿ ಶೋಧ..!!

Published

on

​ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದುನ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ಆರು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿಯ ದೂರದರ್ಶನ ಕೇಂದ್ರದ ಸಮೀಪದಲ್ಲಿರುವ ವೈ. ಮಂಜುನಾಥ್ ಅವರ ನಿವಾಸಕ್ಕೆ ಬೆಳಗ್ಗೆಯೇ ಇಡಿ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಗೋವಾ ಹಾಗೂ ಬೆಂಗಳೂರು ಘಟಕಗಳ ಇಡಿ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದು, ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ವೈ. ಮಂಜುನಾಥ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ದಾಳಿಗೆ ಸಂಬಂಧಿಸಿದ ನಿಖರ ಕಾರಣ ಹಾಗೂ ಪರಿಶೀಲನೆಗೆ ಒಳಪಡಿಸಿರುವ ದಾಖಲೆಗಳ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಇಡಿ ಅಧಿಕಾರಿಗಳು ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ. ಶೋಧ ಕಾರ್ಯ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement