Published
5 hours agoon
By
Akkare News
ಪರಿಸರದ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.. ಅಶೋಕ್ ಕುಮಾರ್ ಪಡ್ಪು
ಕಲ್ಲಡ್ಕ : ಪರಿಸರವು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಗಾಳಿ, ನೀರು, ಮಣ್ಣು, ಸಸ್ಯಗಳು ಮತ್ತು ಪ್ರಾಣಿಗಳು ಸೇರಿ ಪರಿಸರವನ್ನು ರೂಪಿಸುತ್ತವೆ. ಪರಿಸರದ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಎಂದು ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹೇಳಿದರು.
ಅವರು ಜೂನ್ 25 ಗುರುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಯುವವಾಹಿನಿ ಮಾಣಿ ಘಟಕ ವತಿಯಿಂದ ಮಜಿ ವೀರಕಂಭ ಶಾಲಾ ಮುಖಮಂಟಪಕ್ಕೆ ಅಳವಡಿಸಿದ ಸೀಟ್ ಮುಚ್ಚಿಗೆ ಸಮರ್ಪಣೆ ಹಾಗೂ “ಯುವ ವೃಕ್ಷೋತ್ಸವ” ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು ಮಾತನಾಡಿದರು
ಪರಿಸರ ದಿನದಂದು ಗಿಡಗಳನ್ನು ನೆಟ್ಟು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಿರದೆ ತಿಂಗಳುಗಳ ಕಾಲ ಅದರ ಪೋಷಣೆಯ ಜವಾಬ್ದಾರಿಯನ್ನು ಹೊತ್ತುಕೊಂಡು ಮಾಸಾಚಾರಣೆಯ ವಿನೂತನ ಜವಾಬ್ದಾರಿ, ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ, ಸ್ವಚ್ಛತೆಯ ಜಾಗೃತಿ, ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಎಂಬುದಾಗಿ ಯುವ ವಾಹಿನಿಯ ಖಜಾಂಚಿ ಮತ್ತು ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕಿ ಡಾ| ತ್ರಿವೇಣಿ ರಮೇಶ್ ಹೇಳಿದರು.