Published
16 hours agoon
By
Akkare News
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆಯೇ ಭ್ರಷ್ಟ ಅಧಿಕಾರಿಯೊಬ್ಬರಿಗೆ ಬಿಸಿ ಮುಟ್ಟಿಸಿದ್ದಾರೆ. ಸಿರುಗುಪ್ಪದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಅವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಪಾಸ್ತಿಗಳನ್ನು ಪತ್ತೆ ಹಚ್ಚಿದ್ದಾರೆ.








