Connect with us

ಆರೋಗ್ಯ

ಕೋಡಿಂಬಾಡಿ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Published

on

​ಪುತ್ತೂರು: ಕೋಡಿಂಬಾಡಿ ಅಂಗನವಾಡಿ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಪೋಷಕರು ತಮ್ಮ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪೋಲಿಯೋ ಹನಿ ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version