ಬೆಳ್ಳಿಪಾಡಿ ಗ್ರಾಮದ ಜೇಡರಪಾಲು, ಎಣ್ಣೆತೋಡಿ ಹಾಗೂ ಸುರುಳಿಮಜಲು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಸ್ಥಳೀಯರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು.
ಮನವಿಯನ್ನು ಸ್ವೀಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ರಸ್ತೆ ಅಭಿವೃದ್ಧಿಯ ಅಗತ್ಯತೆಯನ್ನು ಗಮನಿಸಿ, ಸಂಬಂಧಿತ ರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮಸ್ಥರು ಹಾಗೂ ಮುಖಂಡರು ಉಪಸ್ಥಿತರಿದ್ದರು.