Published
2 months agoon
By
Akkare News
ಕಾವು, ಜೂನ್ 29: ಕಾವು ಪಂಚವಟಿ ನಗರದ ರಿಕ್ಷಾ ಚಾಲಕರು ಸ್ನೇಹ ಸಂಗಮ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಮಾನ್ಯ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಕಾವು ಪಂಚವಟಿ ನಗರದಲ್ಲಿ ರಿಕ್ಷಾ ಚಾಲಕರ ಅನುಕೂಲಕ್ಕಾಗಿ ಶಾಶ್ವತ ರಿಕ್ಷಾ ತಂಗುದಾಣ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು. 
ಈ ಸಂದರ್ಭದಲ್ಲಿ ರಿಕ್ಷಾ ಚಾಲಕರು, ತಂಗುದಾಣದ ಕೊರತೆಯಿಂದ ಎದುರಾಗುತ್ತಿರುವ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಾರ್ವಜನಿಕರು ಹಾಗೂ ಚಾಲಕರಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳದಲ್ಲಿ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.






