Published
12 hours agoon
By
Akkare News
ಬೆಂಗಳೂರು: ರಾಜ್ಯಾದ್ಯಂತ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರ ಸಂಬಂಧ ಮುಖ್ಯಮಂತ್ರಿಯಾಗಿ ನಾನೊಬ್ಬನೇ ತೀರ್ಮಾನಿಸಲು ಸಾಧ್ಯವಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಆ ಬಗ್ಗೆ ಗಂಭೀರ ಚರ್ಚೆ ಮಾಡಿ ನಿರ್ಧರಿಸಲಾಗುವುದು ಎಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬಿಜೆಪಿ ಸರ್ಕಾರ ಖಾಸಗೀಕರಣದ ಕಾನೂನು ತಂದಾಗ ನೀವು ಯಾಕೆ ವಿರೋಧಿಸಲಿಲ್ಲ? ವಿದ್ಯುತ್ ಇಲಾಖೆ ನೌಕರರನ್ನು ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ನೀವು ನಮ್ಮ ಬಗ್ಗೆ ಕಾಳಜಿ ವಹಿಸು, ನಾವು ನಿಮ್ಮ ಕುರಿತು ಕಾಳಜಿ ವಹಿಸುತ್ತೇವೆ ಎಂದರು. 
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು. ನೀವು ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡಬಾರದು ಎಂದು ನೀವು ಹೋರಾಟ ಮಾಡುತ್ತಿದ್ದೀರಿ. ಈ ಖಾಸಗೀಕರಣದ ಪ್ರಸ್ತಾಪವು 2003ರಲ್ಲೇ ಆಗಿದೆ.
ಬಿಜೆಪಿ ಖಾಸಗಿಕರಣ ನಿರ್ಧಾರ ಯಾಕೆ ವಿರೋಧಿಸಲಿಲ್ಲ? ವಿದ್ಯುತ್ ನಿಗಮಗಳ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಂದಿದ್ದು ಬಿಜೆಪಿ ಸರ್ಕಾರ. ನೀವು ಯಾರೂ ಆಗ ಬಿಜೆಪಿ ನಿರ್ಧಾರಗಳ ವಿರುದ್ಧ ಧ್ವನಿ ಎತ್ತಲಿಲ್ಲ. ಯಾರೂ ಹೋರಾಟ ಮಾಡಲಿಲ್ಲ, ಧಿಕ್ಕಾರ ಹೇಳಲಿಲ್ಲ. ನನ್ನ ಬಳಿ ಹಾಗೂ ಇಂದನ ಸಚಿವ ಕೆ.ಜೆ.ಜಾರ್ಜ್ ಅವರ ಬಳಿ ಬಂದು ಖಾಸಗೀಕರಣಕ್ಕೆ ಅವಕಾಶ ನೀಡಬೇಡಿ ಎಂದು ಹೇಳುತ್ತಿದ್ದೀರಿ. ನೀವು ಸದಾ ನನ್ನ ಜೊತೆ ಇರುತ್ತೀರಿ ಎಂದು ಹೇಳುತ್ತಿದ್ದೀರಿ. ತಪ್ಪು ಮಾಡಿದವರ ವಿರುದ್ಧ ಧಿಕ್ಕಾರ ಹೇಳಿದಾಗ, ಒಳ್ಳೆಯ ಕೆಲಸ ಮಾಡಿದವರಿಗೆ ಜೈಕಾರ ಹೇಳಿದಾಗ ಮಾತ್ರ ಅದಕ್ಕೆ ಗೌರವ ಬರುತ್ತದೆ ಎಂದು ಹೇಳಿದರು. 





