Published
12 hours agoon
By
Akkare News
ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ.
ಈ ವೇಳೆ ಬಿಎಲ್ಒಗಳು ಎಸ್ಐಆರ್ ಅರ್ಜಿಯನ್ನು ನೀಡಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಇದೇ ಅವಧಿಯಲ್ಲಿ ನಡೆಯಲಿದೆ.
ಚುನಾವಣಾ ಆಯೋಗದ ಸೂಚನೆಯಂತೆ, ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಸಲ್ಲಿಸುವುದು ಅತ್ಯಂತ ಮುಖ್ಯವಾಗಿದೆ. ಅರ್ಜಿ ಸಲ್ಲಿಸದಿದ್ದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯದಿರುವ ಸಾಧ್ಯತೆ ಇರುವುದರಿಂದ, ಮತದಾನದ ಹಕ್ಕಿನ ಮೇಲೂ ಪರಿಣಾಮ ಬೀಳಬಹುದು.





