Published
2 hours agoon
By
Akkare News
ಪುತ್ತೂರು, ಜುಲೈ 1: ದಾರಂದಕುಕ್ಕು ನಿವಾಸಿ ಶ್ರೀಮತಿ ಜಯಂತಿ (ದಿ. ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ ಪರಿಸ್ಥಿತಿಯನ್ನು ಮನಗಂಡು ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ₹10,000 ಧನಸಹಾಯವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಲಾಯಿತು.
ಕಳೆದ ತಿಂಗಳು ಪತಿಯನ್ನು ಕಳೆದುಕೊಂಡಿದ್ದ ಶ್ರೀಮತಿ ಜಯ ಅವರು ಇತ್ತೀಚೆಗೆ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಕಾಲು ಮುರಿದು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರ್ಥಿಕ ಸಂಕಷ್ಟವನ್ನು ಅರಿತು ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳು ಹಾಗೂ ಸದಸ್ಯರು ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ (ರಿ )ಪುತ್ತೂರು ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು , ಸಮಾಜದ ಬಡ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮುಂದೆಯೂ ಇದೇ ರೀತಿಯ ನೆರವು ನೀಡುವ ಕಾರ್ಯವನ್ನು ಬಿಲ್ಲವ ಬ್ರಿಗೇಡ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು





