Connect with us

ಇಂದಿನ ಕಾರ್ಯಕ್ರಮ

ಸಂಕಷ್ಟದಲ್ಲಿದ್ದ ಮಹಿಳೆಗೆ ಬಿಲ್ಲವ ಬ್ರಿಗೇಡ್ ಪುತ್ತೂರಿನಿಂದ ₹10,000 ಧನಸಹಾಯ

Published

on

​ಪುತ್ತೂರು, ಜುಲೈ 1: ದಾರಂದಕುಕ್ಕು ನಿವಾಸಿ ಶ್ರೀಮತಿ  ಜಯಂತಿ (ದಿ.  ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ ಪರಿಸ್ಥಿತಿಯನ್ನು ಮನಗಂಡು ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ₹10,000 ಧನಸಹಾಯವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಲಾಯಿತು.

ಕಳೆದ ತಿಂಗಳು ಪತಿಯನ್ನು ಕಳೆದುಕೊಂಡಿದ್ದ ಶ್ರೀಮತಿ ಜಯ ಅವರು ಇತ್ತೀಚೆಗೆ ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಕಾಲು ಮುರಿದು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರ್ಥಿಕ ಸಂಕಷ್ಟವನ್ನು ಅರಿತು ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳು ಹಾಗೂ ಸದಸ್ಯರು ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ (ರಿ )ಪುತ್ತೂರು ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು , ಸಮಾಜದ ಬಡ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮುಂದೆಯೂ ಇದೇ ರೀತಿಯ ನೆರವು ನೀಡುವ ಕಾರ್ಯವನ್ನು ಬಿಲ್ಲವ ಬ್ರಿಗೇಡ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು

ಧನಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರಿನ ,ಪ್ರಧಾನ ಕಾರ್ಯದರ್ಶಿ ರಂಜಿತ್ ಸುವರ್ಣ ಉಪಾಧ್ಯಕ್ಷರಾದ ಅಣ್ಣಿ ಪೂಜಾರಿ ಕೋಶಾಧಿಕಾರಿ ಚಂದ್ರಶೇಖರ ಕಲ್ಲಗುಡ್ಡೆ ಸದಸ್ಯರಾದ ವಿನಯ ಸುವರ್ಣ ರವರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement