Published
1 day agoon
By
Akkare News
ಪುತ್ತೂರು :ಜು.03 : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ, ಎಂಜಿನಿಯರಿಂಗ್ ವಿದ್ಯಾರ್ಥಿ ಕೃಷ್ಣ ಜೆ.ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂಪಾಯಿ ಜೀವನಾಂಶ ಪಾವತಿಸಬೇಕು ಎಂಬ ಷರತ್ತಿನ ಮೇರೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ತಡೆಜ್ಞೆ ನೀಡಿದೆ. ಮೊದಲ ಕಂತಿನ ಹಣವನ್ನು ಮುಂದಿನ ಒಂದು ವಾರದೊಳಗೆ ಪಾವತಿಸಲು ಆದೇಶಿಸಲಾಗಿದೆ.