Connect with us

ಇತರ

ಶೇರು ಹೂಡಿಕೆಯಲ್ಲಿ ಲಾಭದ ಆಮಿಷ ಲಕ್ಷಾಂತರ ರೂ. ವಂಚನೆ: ಉಡುಪಿ ಮೂಲದ ಮಹಿಳೆ ಮುಂಬೈ ಪೊಲೀಸರಿಂದ ಬಂಧನ

Published

on

ಉಡುಪಿ: ಷೇರು ಮಾರುಕಟ್ಟೆ ಹೂಡಿಕೆಯ ಮೇಲೆ ಶೇ.10ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಚೆಕ್ ಬೌನ್ಸ್ ಹಾಗೂ ಆರ್ಥಿಕ ವಂಚನೆಗೆ ಸಂಬಂಧಿಸಿದ ಇತರ ಪ್ರಕರಣಗಳೂ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುಂಬೈನ ಕಾಂದಿವಲಿ ಪಶ್ಚಿಮ ನಿವಾಸಿ, ಸುಮಾರು 60 ವರ್ಷದ ರಜನಿ ದಯಾನಂದ ಶೆಟ್ಟಿ ನೀಡಿದ ದೂರಿನ ಪ್ರಕಾರ, ದೀಪಿಕಾ ಮನೋಜ್ ಶೆಟ್ಟಿ ಅವರು ಷೇರು ಮಾರುಕಟ್ಟೆ ಹೂಡಿಕೆಗೆ ಶೇ.10ರಷ್ಟು ಖಚಿತ ಲಾಭ ದೊರೆಯುತ್ತದೆ ಎಂದು ನಂಬಿಸಿ ರಜನಿ ಶೆಟ್ಟಿ ಹಾಗೂ ಅವರ ಸಹೋದರರಿಂದ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಯ ಭರವಸೆಯನ್ನು ನಂಬಿದ ಸಂತ್ರಸ್ತರು ಒಟ್ಟು ₹10 ಲಕ್ಷ ಹೂಡಿಕೆ ಮಾಡಿದ್ದು, ಬಳಿಕ ಹಣ ಮರಳಿಸದೇ ವಂಚನೆ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಕಾಂದಿವಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version