Connect with us

ಇತರ

SC/ST ಯುವಕರಿಗೆ ಗುಡ್ ನ್ಯೂಸ್! ಉಚಿತ ಚಾಲನಾ ತರಬೇತಿ, ಉಚಿತ ಲೈಸೆನ್ಸ್; KSRTCಯಿಂದ ಅರ್ಜಿ ಆಹ್ವಾನ

Published

on

ರಾಜ್ಯದ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮಹತ್ವದ ಯೋಜನೆ ಜಾರಿಗೊಳಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ SCSP ಹಾಗೂ TSP ಯೋಜನೆಯಡಿ ಉಚಿತ ಲಘು (LMV) ಮತ್ತು ಭಾರಿ (HMV) ವಾಹನ ಚಾಲನಾ ತರಬೇತಿ ಹಾಗೂ ಉಚಿತ ಚಾಲನಾ ಪರವಾನಗಿ (Driving Licence) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಐದು ಪ್ರಮುಖ ಪ್ರಾದೇಶಿಕ ಚಾಲನಾ ತರಬೇತಿ ಕೇಂದ್ರಗಳಲ್ಲಿ ಈ ವಿಶೇಷ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಿತಿಯೊಳಗಿರಬೇಕು. ತರಬೇತಿಯ ಅವಧಿ 30 ದಿನಗಳು ಆಗಿದ್ದು, ಸುರಕ್ಷಿತ ಹಾಗೂ ಕೌಶಲ್ಯಾಧಾರಿತ ಚಾಲನಾ ತರಬೇತಿ ನೀಡಲಾಗುತ್ತದೆ.ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 45 ವರ್ಷ ವಯೋಮಿತಿ ನಿಗದಿಯಾಗಿದೆ. ಜೊತೆಗೆ, ಅಭ್ಯರ್ಥಿಗಳು ಕನಿಷ್ಠ ಒಂದು ವರ್ಷದ ಹಳೆಯ LMV ಚಾಲನಾ ಪರವಾನಗಿ ಹೊಂದಿರಬೇಕು. ಈ ತರಬೇತಿಯ ಅವಧಿಯೂ 30 ದಿನಗಳು ಆಗಿರುತ್ತದೆ.
  •  
ಅಗತ್ಯ ದಾಖಲೆಗಳು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು: ಜಾತಿ ಪ್ರಮಾಣ ಪತ್ರ ಆಧಾರ್ ಕಾರ್ಡ್ ಇತ್ತೀಚಿನ 4 ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳು ಅರ್ಜಿ ಸಲ್ಲಿಸುವ ವಿಧಾನ ಅಭ್ಯರ್ಥಿಗಳು ಕೆಎಸ್‌ಆರ್‌ಟಿಸಿಯ ಅಧಿಕೃತ ಉದ್ಯೋಗ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಸೌಲಭ್ಯ ಇಲ್ಲದವರು ತಮ್ಮ ಸಮೀಪದ ಕೆಎಸ್‌ಆರ್‌ಟಿಸಿ ಚಾಲನಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.ಈ ಯೋಜನೆಯ ಮೂಲಕ ಉದ್ಯೋಗವಿಲ್ಲದ SC/ST ಯುವಕರಿಗೆ ಚಾಲನಾ ಕೌಶಲ್ಯ ಬೆಳೆಸಿ ಸ್ವಯಂ ಉದ್ಯೋಗ ಅಥವಾ ಚಾಲಕರಾಗಿ ಉದ್ಯೋಗ ಪಡೆಯಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಸರ್ಕಾರದ ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.ಅರ್ಹ ಮತ್ತು ಆಸಕ್ತ ಯುವಕ-ಯುವತಿಯರು ನಿಗಮದ ಅಧಿಕೃತ ಉದ್ಯೋಗ ವೆಬ್‌ಸೈಟ್ ಆದ www.ksrtcjobs.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಆನ್‌ಲೈನ್ ಸೌಲಭ್ಯವಿಲ್ಲದವರು ತಮ್ಮ ಹತ್ತಿರದ ಕೆಎಸ್‌ಆರ್‌ಟಿಸಿ ತರಬೇತಿ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ಯುವಕ-ಯುವತಿಯರು ನಿಗಮದ ಅಧಿಕೃತ ಉದ್ಯೋಗ ವೆಬ್‌ಸೈಟ್ ಆದ www.ksrtcjobs.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಆನ್‌ಲೈನ್ ಸೌಲಭ್ಯವಿಲ್ಲದವರು ತಮ್ಮ ಹತ್ತಿರದ ಕೆಎಸ್‌ಆರ್‌ಟಿಸಿ ತರಬೇತಿ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version