Published
4 hours agoon
By
Akkare News

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ತಲ್ವಾರ್ ಬೀಸುತ್ತಾ ಬಂದ ಆರೋಪಿ ಬಸ್ ನಿಲ್ದಾಣದ ಸಮೀಪದ ಮೊಬೈಲ್ ಅಂಗಡಿಗೆ ನುಗ್ಗಿ ಅಲ್ಲಿದ್ದ ಯುವಕರಿಗೆ ಜೀವ ಬೆದರಿಕೆ ಹಾಕಿ ಮೊಬೈಲ್ ನೀಡುವಂತೆ ಒತ್ತಾಯಿಸಿದ್ದಾನೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಭಯದಿಂದ ಸ್ಥಳದಿಂದ ಓಡಿಹೋಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಧಾವಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಎಲ್ಲಾ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಈಗ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಘಟನೆಗೆ ನಿಖರ ಕಾರಣ ಹಾಗೂ ಆರೋಪಿಯ ಹಿನ್ನೆಲೆಯ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.





