Connect with us

ಇತರ

ಸಾಂದೀಪನಿ ವಿದ್ಯಾಸಂಸ್ಥೆಯ ಶಿಕ್ಷಕ ಮುರಳಿಕೃಷ್ಣ ಇವರಿಗೆ ರಾಜ್ಯ ಪ್ರಶಸ್ತಿ

Published

on

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯಸಂಸ್ಥೆಯ ವತಿಯಿಂದ ಕೊಡಮಾಡುವ ಪ್ರತಿಷ್ಠಿತ Long service medal ಪ್ರಶಸ್ತಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು (ರಿ) ನರಿಮೊಗರು,ಪುತ್ತೂರು ಇಲ್ಲಿನ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಶ್ರೀಯುತ ಮುರಳಿಕೃಷ್ಣ. ಪಿ ಇವರು ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ಪ್ರಸನ್ನ.ಕೆ ಇವರು ತಿಳಿಸಿರುತ್ತಾರೆ. ಸ್ಕೌಟ್ಸ್ ದಳ ನಾಯಕರು ತಾವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ಸಲ್ಲಿಸಿದ ಪ್ರಾಮಾಣಿಕ ಸೇವೆ ಹಾಗೂ ನಾಯಕತ್ವಕ್ಕೆ ಪೂರಕವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀ ಮುರಳಿಕೃಷ್ಣ. ಪಿ ಇವರಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರ, ಕಾರ್ಯದರ್ಶಿಗಳಾದ ಶ್ರೀಯುತ ಕೃಷ್ಣಪ್ರಸಾದ್ ಕೆದಿಲಾಯ, ಕೋಶಾಧಿಕಾರಿಗಳಾದ ಶ್ರೀಯುತ ಹರೀಶ್ ಪುತ್ತೂರಾಯ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಮುಖ್ಯೋಪಾಧ್ಯಾಯರಾದ ಶ್ರೀಯುತ ಪ್ರಸನ್ನ.ಕೆ ಇವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement