ಪುತ್ತೂರು: ನಿಧಾನರಾದ ಹಿರಿಯ ಕಾಂಗ್ರೆಸ್ ಮುಖಂಡ ಮುರ ಫುತ್ತು ಹಾಜಿ ಮನೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಭೇಟಿ ನೀಡಿ ಪುತ್ತು ಹಾಜಿಯ ಪುತ್ರ ನ್ಯಾಯವಾದಿ ಎಂ ಪಿ ಅಬೂಬಕ್ಕರ್ ರವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ದ ಕ ಜಿಲ್ಲಾಧ್ಯಕ್ಷ ಎಚ್. ಮಹಮ್ಮದ್ ಅಲಿ, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಎನ್ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಕಾಂಗ್ರೆಸ್ ಪ್ರಚಾರ ಸಮಿತಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ : ರಾಜರಾಮ್ ಕೆ ಬಿ. ಸ್ಥಳೀಯ ಕಾಂಗ್ರೆಸ್ ಮುಖoಡ ರಶೀದ್ ಮುರ, ಉದ್ಯಮಿ ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.