ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯ ಕಡೆಪಾಲದ ವಿವಾಹಿತ ಮಹಿಳೆ ಫಾತಿಮತ್ ನಿಶಾನ (21ವರ್ಷ) ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 100/2026, ಕಲಂ:85,103(1) R/W3(5) BNS 2023 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಮೃತ ಮಹಿಳೆಯ ಮಾವ ಸಿ ಪಿ ಅಳವಿ (54), ಅತ್ತೆ ಅಯಿಷಾ ಸಿ ಎ ಹಾಗೂ ನಾದಿನಿ ಫಸಿಲಾ ಸಿ ಎ (29) ಎಂಬವರುಗಳನ್ನು ದಿನಾಂಕ:22.07.2026 ರಂದು ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ವಿಚಾರಣೆ ನಡೆಸುತ್ತಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.