Connect with us

ಕಾರ್ಯಕ್ರಮಗಳು

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ನೂತನ ಸದಸ್ಯರ ಸೇರ್ಪಡೆ – ಎಸ್ ಎಲ್ ವಿ ಬುಕ್ ಹೌಸ್ ವತಿಯಿಂದ ಸದಸ್ಯರಿಗೆ ಡೈರಿ ವಿತರಣೆ

Published

on

ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ವಿಟ್ಲದಲ್ಲಿರುವ ಅವರ ನಿವಾಸ ‘ಶ್ರವಣ’ದಲ್ಲಿ ಇತ್ತೀಚೆಗೆ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ವಹಿಸಿದ್ದರು. ದೀಪ ಪ್ರಜ್ವಲಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಹಿರಿಯ ಪತ್ರಕರ್ತ ದಂಪತಿಗೆ ಗೌರವ ಸನ್ಮಾನ ಪತ್ರಿಕಾರಂಗ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಸುದೀರ್ಘ ಕೊಡುಗೆ ನೀಡಿದ ಹಿರಿಯ ಪತ್ರಕರ್ತ ಯಶು ವಿಟ್ಲ ದಂಪತಿಯನ್ನು ಈ ಸಂದರ್ಭದಲ್ಲಿ ಶಾಲು ಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಸನ್ಮಾನ ಪತ್ರ ವಾಚಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಯಶು ವಿಟ್ಲ ಅವರು, “ಸಾಹಿತ್ಯ ಕ್ಷೇತ್ರ ಹಾಗೂ ಪತ್ರಿಕೋದ್ಯಮದಲ್ಲಿನ ನನ್ನ ಸುದೀರ್ಘ ಪಯಣವನ್ನು ಗುರುತಿಸಿ ಗೌರವಿಸಿದ ತಾಲೂಕು ಘಟಕಕ್ಕೆ ಅಭಾರಿಯಾಗಿದ್ದೇನೆ” ಎಂದು ಧನ್ಯವಾದ ಅರ್ಪಿಸಿ, ಪತ್ರಕರ್ತರಿಗೆ ಶುಭ ಹಾರೈಸಿದರು. ನೂತನ ಸದಸ್ಯರ ಸೇರ್ಪಡೆ ಹಾಗೂ ಡೈರಿ ವಿತರಣೆ ಇದೇ ವೇಳೆ ಯೂನಿಯನ್‌ಗೆ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರನ್ನು ವೇದಿಕೆಯಲ್ಲಿದ್ದ ಅತಿಥಿಗಳು ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ದಿವಾಕರ್ ದಾಸ್ ಅವರ ಮಾಲಕತ್ವದ ಎಸ್.ಎಲ್.ವಿ. ಬುಕ್ ಹೌಸ್ ವತಿಯಿಂದ ಯೂನಿಯನ್‌ನ ಎಲ್ಲಾ ಸದಸ್ಯರಿಗೆ ಡೈರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಸದಸ್ಯರಾದ ವಿ.ಟಿ. ಪ್ರಸಾದ್, ಹೇಮಾ ಜಯರಾಮ್ ರೈ, ವಿಟ್ಲ ಅರಮನೆಯ ಜಯರಾಮ್ ಬಲ್ಲಾಳ್, ತಾಲೂಕು ಘಟಕದ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಪ್ರಜ್ವಲ್ ಕೋಟ್ಯಾನ್, ಜೊತೆ ಕಾರ್ಯದರ್ಶಿ ಸುಮನಾ ಕೇಪು ಸೇರಿದಂತೆ ಹಲವು ಪತ್ರಕರ್ತರು ಹಾಗೂ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆ: ಮೌಶ್ಮಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಪುಣಚ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯೆ ಮಧುಶ್ರೀ ವಂದಿಸಿ, ತಾಲೂಕು ಕೋಶಾಧಿಕಾರಿ ಅಶ್ವಿನಿ ಪೆರುವಾಯಿ ಕಾರ್ಯಕ್ರಮ ನಿರೂಪಿಸಿದರು. ಯಶು ವಿಟ್ಲರವರು ತಾನು ಬರೆದ ಪುಸ್ತಕವನ್ನು ಈ ಸಂದರ್ಭದಲ್ಲಿ ತುಳು ಅಕಾಡಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಮತ್ತು ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಗೌರವಾಧ್ಯಕ್ಷರಾದ ಹರೀಶ್ ಬಂಟ್ವಾಳ, ತಾಲೂಕು ಅಧ್ಯಕ್ಷರಾದ ರಾಮ್ ದಾಸ್ ಶೆಟ್ಟಿ ಸೇರಿದಂತೆ ಅತಿಥಿಗಳಿಗೆ ಹಾಗೂ ಸದಸ್ಯರಿಗೆ ವಿತರಿಸಿದರು.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version