Published
2 hours agoon
By
Akkare News
ಈ ದುಃಖದ ಸಂದರ್ಭದಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಧೈರ್ಯದಿಂದ ಇರಬೇಕೆಂದು ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ವೇಳೆ ದುರಂತದಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಬಿ. ರಮಾನಾಥ ರೈ ಅವರು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ನಾರಾಯಣ ನಾಯ್ಕ್, ಚಂದ್ರಶೇಖರ್ ಬಂಡಾರಿ, ಬಿ ಆರ್ ಅಂಚನ್, ಫಾರೂಕ್ ಪೆರ್ನೆ, ಗೀತೆಶ್ ಪೆರ್ನೆ ಮೊದಲದವರು ಉಪಸ್ಥಿತರಿದ್ದರು.



