ಪುತ್ತೂರು:ಕೆಲವು ದಿನಗಳ ಹಿಂದೆ ನಿಧನರಾಗಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಅವರಿಗೆ ನುಡಿನಮನ ಕಾರ್ಯಕ್ರಮ ಜು.26ರಂದು ಬೆಳಿಗ್ಗೆ 10 ಗಂಟೆಗೆ ದೇವಳದ ಚಿನ್ಮಯಿ ಸಭಾಂಗಣದಲ್ಲಿ ನಡೆಯಲಿದೆ. ಕಳೆದ 2-3 ದಶಕಗಳಿಂದ ನಮ್ಮ ದೇವಸ್ಥಾನದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ನಿರಂಜನ ನಿರಂಜನ ರೈಯವರ ನುಡಿನಮನೆ ಕಾರ್ಯಕ್ರಮದಲ್ಲಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ದಾಂಜಲಿ ಸಲ್ಲಿಸಲು ಹಾಗೂ ಅವರ ಸೇವೆಯನ್ನು ಸ್ಮರಿಸಲು ಅಭಿಮಾನಿಗಳು, ಹಿತೈಷಿಗಳು ಹಾಗೂ ದೇವಳದ ಭಕ್ತಾದಿಗಳು ಆಗಮಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ, ಉತ್ಸವ ಸಮಿತಿ, ಬೈಲುವಾರು ಉಸ್ತುವಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .