Published
1 hour agoon
By
Akkare News
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.
ಮಂಗಳೂರು ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಮಾಡಲಾಗಿದ್ದು, ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ.



