Connect with us

ಇತರ

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Published

on

ಪರೀಕ್ಷಾ ಅಕ್ರಮ ಹಾಗೂ ನೀಟ್ ಪೇಪರ್ ಲೀಕ್ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಮತ್ತು ವಿದ್ಯಾರ್ಥಿಗಳು ನಡೆಸುತ್ತಿದ್ದ ತಿಂಗಳ ಸುದೀರ್ಘ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪ್ರಧಾನಿ ಮೋದಿಯವರಿಗೆ ಪತ್ರ ರವಾನಿಸಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆಯುವುದು ಮತ್ತು ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದೂ ಸೇರಿದಂತೆ ಪ್ರತಿಭಟನಾಕಾರರ ಮೂರೂ ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿದೆ.

NEET ಹಗರಣಕ್ಕೆ ಸಂಬಂಧಿಸಿ ಪ್ರತಿಭಟನೆ ಬಳಿಕ ನಡೆದಿರುವ ಮಹತ್ವದ ಬೆಳವಣಿಗೆಯಲ್ಲಿ ಇದೀಗ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಕಳುಹಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ(CJP) ಮತ್ತು ಕೇಂದ್ರದ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಕೆಲವೇ ಗಂಟೆಗಳ ಮೊದಲು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಚಾರವನ್ನು ಘೋಷಿಸಿದ್ದಾರೆ. ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ದೆಹಲಿಯಲ್ಲಿ ತಮ್ಮ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ತಿಂಗಳ ಸುದೀರ್ಘ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಾರ್ವಜನಿಕರ ಒತ್ತಾಯದ ಬಳಿಕ ರಾಜೀನಾಮೆ ಸಲ್ಲಸಿದ ಮೊದಲ ಸಚಿವ ಅವರಾಗಿದ್ದಾರೆ. ನೀಟ್ ಅಕ್ರಮಕ್ಕೆ ಸಂಬಂಧಿಸಿ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೆಹಲಿಯ ಜಂತರ್ ಮಂತರ್‌ನಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದ ಕಾಕ್ರೋಚ್ ಜನತಾ ಪಾರ್ಟಿಯ ನೇತೃತ್ವದ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು. ಇದೀಗ ಈಡೇರಿದ್ದು ಮುಂದಿನ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿವೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸುದ್ದಿ ಬಂದ ಕ್ಷಣ ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾ ಸ್ಥಳವು ಸಂಭ್ರಮಾಚರಣೆ ನಡೆಸಲಾಗಿದೆ. ರಾಜೀನಾಮೆ ಸುದ್ದಿಗೆ ಪ್ರತಿಕ್ರಿಯಿಸಿದ ಸಿಜೆಪಿ, “ವಿದ್ಯಾರ್ಥಿ ಶಕ್ತಿ ಚಿರಾಯುವಾಗಲಿ” ಎಂದು ಪೋಸ್ಟ್ ಮಾಡಿದೆ. “ನಾವು ಅಂದುಕೊಂಡಿದ್ದನ್ನು ಸಾಧಿಸಿದೆವೆು” ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ, ಜಂತರ್ ಮಂತರ್ ವೇದಿಕೆಯಿಂದ ಪ್ರಧಾನ್ ಅವರ ರಾಜೀನಾಮೆ ಸುದ್ದಿಯನ್ನು ಪ್ರಕಟಿಸಿದರು. “ಈ ಸರ್ಕಾರದಲ್ಲಿ ಯಾರೂ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಹೇಳುತ್ತಿದ್ದರು. ಆದರೆ ನಾವು ಅದನ್ನು ಮಾಡಿದ್ದೇವೆ.” ಎಂದರು.

ಪ್ರತಿಭಟನಾಕಾರರಿಂದ 3 ಮುಖ್ಯ ಬೇಡಿಕೆಗಳೇನು?

  • ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ,
  • ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು
  • ನೀಟ್ ಪೇಪರ್ ಲೀಕ್‌ನಿಂದಾಗಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸುವುದು.
ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಬೀಡುಬಿಟ್ಟಿದ್ದ ಪ್ರತಿಭಟನಾಕಾರರ ಮುಖ್ಯ ಬೇಡಿಕೆಯೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಾಗಿತ್ತು. ಶುಕ್ರವಾರ ನಡೆದ ಮಾತುಕತೆಯ ವೇಳೆ ಕೇಂದ್ರ ಸರ್ಕಾರವು ಕೊನೆಯ ಎರಡು ಬೇಡಿಕೆಗಳಿಗೆ ಸಮ್ಮತಿಸಿತ್ತಾದರೂ, ರಾಜೀನಾಮೆ ಬೇಡಿಕೆಯ ಕುರಿತು ಮೌನ ವಹಿಸಿತ್ತು. ಪ್ರಧಾನ್ ಅವರ ರಾಜೀನಾಮೆ ವಿಚಾರವಾಗಿಯೇ ‘ಸಿಜಿಪಿ’ ಮತ್ತು ಕೇಂದ್ರ ಸರ್ಕಾರದ ನಡುವಿನ ಮಾತುಕತೆ ತಡೆಹಿಡಿಯಲ್ಪಟ್ಟಿತ್ತು. ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸದಿದ್ದರೆ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಸಿಜಿಪಿ ಶನಿವಾರ ಬೆಳಿಗ್ಗೆ ಸ್ಪಷ್ಟಪಡಿಸಿತ್ತು. ಪ್ರಧಾನ್ ಅವರ ರಾಜೀನಾಮೆಯೊಂದಿಗೆ, ಪ್ರತಿಭಟನಾಕಾರರು ಇಟ್ಟಿದ್ದ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದಂತಾಗಿದೆ.

ಧರ್ಮೇಂದ್ರ ಪ್ರಧಾನ್ ಎಕ್ಸ್ ಪೋಸ್ಟ್ ನಲ್ಲೇನಿದೆ?

ಧರ್ಮೇಂದ್ರ ಪ್ರಧಾನ್ ಅವರು ಹಿಂದಿಯಲ್ಲಿ ಬರೆದಿರುವ 2 ಪುಟಗಳ ರಾಜೀನಾಮೆ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ಈ ದೇಶದ ಯುವಕರ ಆಕಾಂಕ್ಷೆಗಳು, ಭಾವನೆಗಳು ಮತ್ತು ಸರಿಯಾದ ನಿರೀಕ್ಷೆಗಳ ಬಗ್ಗೆ ನನಗೆ ಆಳವಾದ ಗೌರವವಿದೆ. ಭಾರತದ ಯುವ ಪೀಳಿಗೆಯ ಕನಸುಗಳನ್ನು ನನಸಾಗಿಸುವುದು ನಮ್ಮ ರಾಜಕೀಯ ಮತ್ತು ಸಾಮಾಜಿಕ ಜೀವನದ ನೈತಿಕ ಸಂಕಲ್ಪವಾಗಿದೆ. ಗೌರವಾನ್ವಿತ ಪ್ರಧಾನ ಮಂತ್ರಿಯವರ ದಾರ್ಶನಿಕ ನಾಯಕತ್ವದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದಕ್ಕಾಗಿ ನಾನು ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.” ಎಂದು ಅದರಲ್ಲಿ ಉಲ್ಲೇಖವಾಗಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version