Published
1 hour agoon
By
Akkare News
ಮಂಗಳೂರು ಜುಲೈ 26: ಬಾಗಲಕೋಟೆಯಲ್ಲಿ ಇತ್ತೀಚೆಗೆ ಸೀಜ್ ಮಾಡಲಾದ ₹5.5 ಕೋಟಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತು ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಡ್ರಗ್ಸ್ ಸಾಗಾಟಕ್ಕೆ ಆಂಬ್ಯುಲೆನ್ಸ್ ಬಳಸುತ್ತಿದ್ದ ಬೆಳ್ತಂಗಡಿಯ ಚಾಲಕ ಜಲೀಲ್ ಬಾಬಾ ವಿರುದ್ಧ ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಪ್ರಸ್ತುತ ಜಲೀಲ್ ಬಾಬಾ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಜಾಲ ಬೀಸಲಾಗಿದೆ.