Published
1 hour agoon
By
Akkare News
ಬಂಟ್ವಾಳ ಜುಲೈ 28: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ (ಜುಲೈ 27) ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನ ಆರೋಗ್ಯ ಸ್ಥಿರಗೊಂಡ ಹಿನ್ನೆಲೆಯಲ್ಲಿ 11 ದಿನಗಳ ಬಳಿಕ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. 
ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಚೇತರಿಸಿಕೊಂಡ ನಂತರ ಆತನನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು. ಸಂಪೂರ್ಣವಾಗಿ ಗುಣಮುಖನಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಎಎಸ್ಪಿ ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಠಾಣೆಯ ಇನ್ಸ್ಪೆಕ್ಟರ್ ಆನಂತಪದ್ಮನಾಭ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.







