ಮಳೆ ಇಲ್ಲದೇ ತೀವ್ರ ಬರದಿಂದ ಕಂಗೆಟ್ಟಿರುವ ಕರ್ನಾಟಕ ರಾಜ್ಯದ ಜನತೆಗೆ, ಅದರಲ್ಲೂ ವಿಶೇಷವಾಗಿ ರಾಜ್ಯದ ರೈತರಿಗೆ ಒಂದು ಸಂತಸದ ಸುದ್ದಿ ಇದೆ. ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳವರೆಗೆ ರಾಜ್ಯಾದ್ಯಂತ ಮಳೆಯ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇಂದು ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಇಂದು ಅದರೆ ಜುಲೈ 27ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಉಳಿದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿತ್ತು. ಇದರರ್ಥ ಈ ಎರಡು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ, ಉಳಿದೆಡೆ ಸಾಧಾರಣದಿಂದ ಮಧ್ಯಮ ಮಳೆ ಆಗುವ ಕುರಿತು ಎಚ್ಚರಿಕೆ ನೀಡಲಾಗಿದೆ. ನಾಳೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನಾಳೆ ಅಂದರೆ ಜುಲೈ 27 ಮಂಗಳವಾರದಂದು ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಳಿದ ಎಲ್ಲಾ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಮುಂದುವರಿಯಲಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಜುಲೈ 29ರಂದು 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನಾಡಿದ್ದು ಅಂದರೆ ಜುಲೈ 29, ಬುಧವಾರದಂದು ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದೆತೆ ಮೂರು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 30ರಂದು 3 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಜುಲೈ 30ರಂದು ಅಂದರೆ ಗುರುವಾರ ಮತ್ತೆ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳಗಾವಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಶುಕ್ರವಾರ 6 ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಜುಲೈ 31ರಂದು ಅಂದರೆ ಶುಕ್ರವಾರದಂದು ಆರು ಜಿಲ್ಲೆಗಳಿಗೆ ಮಳೆ ಅಲರ್ಟ್ ಮುಂದುವರಿಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯ ಈ ಮುನ್ಸೂಚನೆಯು ಕೃಷಿ ಕ್ಷೇತ್ರಕ್ಕೆ ಉತ್ತಮ ಸುದ್ದಿಯಾಗಿದೆ. ಬೇಸಿಗೆಯ ಬಳಿಕ ಮಳೆ ಬಂದರೆ ಬೆಳೆಗಳು ಚೆನ್ನಾಗಿ ಬೆಳೆಯಲು ಸಹಾಯವಾಗುತ್ತದೆ. ವಿಶೇಷವಾಗಿ ಕಾಫಿ, ಏಲಕ್ಕಿ, ಅಡಿಕೆ, ಭತ್ತ ಮತ್ತು ಇತರೆ ಬೆಳೆಗಳಿಗೆ ಇದು ಅನುಕೂಲಕರ. ಆದರೆ ಆರೆಂಜ್ ಅಲರ್ಟ್ ಇರುವ ಪ್ರದೇಶಗಳಲ್ಲಿ ಭಾರೀ ಮಳೆ, ಗಾಳಿ ಮತ್ತು ಪ್ರವಾಹದ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದಿರಬೇಕು. ಕಡಿಮೆ ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ. ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.