Published
2 months agoon
By
Akkare News
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನಂತೆ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲರಾದ ಹಬೀಬ್ ಅಲಿ, ಹರೀಶ್ ಪಾಂಗಾಳ ಮೊದಲಾದವರು ಹಾಜರಿದ್ದರು.




