Published
10 hours agoon
By
Akkare News
ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಜು.30 ರ ಗುರುವಾರ ಬೆಳಿಗ್ಗೆ 10:00 ಗಂಟೆಗೆ ನರಿಮೊಗರು ಗ್ರಾಮ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು. 
ಆದರೆ ಜು.29 ರೊಳಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ತಿಳಿಸಿದೆ.ರಸ್ತೆ ರಿಪೇರಿ ಮನವಿಗೆ ಸ್ಪಂದಿಸದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಸಾರ್ವಜನಿಕರೊಂದಿಗೆ ಸೇರಿ ಧರಣಿ ನಡೆಸುವುದಾಗಿ ಟ್ರಸ್ಟ್ ಪದಾಧಿಕಾರಿಗಳು ಹೇಳಿದ್ದಾರೆ.




