Connect with us

ಕ್ರೀಡೆ

ಸಾಂದೀಪನಿ ವಿದ್ಯಾರ್ಥಿಗಳು ಶಟಲ್ ಬ್ಯಾಡ್ ಮಿಂಟನ್ ನಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ:

Published

on

ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಆಫೀಸರ್ಸ್ ಕ್ಲಬ್ ಪುತ್ತೂರು ಇಲ್ಲಿ ಜುಲೈ 29ರಂದು ಜರುಗಿದ ವಲಯ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 6ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಣಮ್ ಎನ್ , ತನ್ಮಯ್ ರೈ ಹಾಗೂ ಅಕುಲ್ ಪ್ರಸಾದ್ 7ನೇ ತರಗತಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕರಾದ ಶ್ರೀ ಜಯಚಂದ್ರ ರವರು ತರಬೇತಿ ನೀಡಿದ್ದಾರೆ. ಇವರಿಗೆ ಶಾಲಾ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಎಸ್ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದನೆಗಳನ್ನು ತಿಳಿಸಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement