Published
10 hours agoon
By
Akkare News
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ್ದ ಲಾವಣ್ಯ ಕೊಲೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಕಳೆದ ಜುಲೈ 16ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಚೇತನ್, ಕೊಲೆಗೆ ಬಳಸಿದ್ದ ಮಾರಕಾಸ್ತ್ರವನ್ನು ಉಪ್ಪಿನಂಗಡಿಯ ಕೃಷಿ ಸಲಕರಣೆಗಳ ಮಾರಾಟ ಮಳಿಗೆಯಿಂದ ಖರೀದಿಸಿದ್ದ ಹಿನ್ನೆಲೆಯಲ್ಲಿ, ಬುಧವಾರ ಪೊಲೀಸರು ಸ್ಥಳ ಮಹಜರು ನಡೆಸಿದರು. 
ಕತ್ತಿಯನ್ನು ಕಾಗದದಲ್ಲಿ ಸುತ್ತಿ ಪ್ಯಾಕ್ ಮಾಡಿದ ಬಳಿಕ, ಅದನ್ನು ಕೆಲಕಾಲ ಅಂಗಡಿಯಲ್ಲೇ ಬಿಟ್ಟು ಹೊರಗೆ ಹೋಗಿದ್ದ ಆರೋಪಿ, ನಂತರ ಮರಳಿ ಬಂದು ಕತ್ತಿಯನ್ನು ತೆಗೆದುಕೊಂಡು ಹೋಗಿರುವ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ದಾಖಲಾಗಿವೆ. ಈ ಎಲ್ಲಾ ಮಾಹಿತಿಗಳನ್ನು ಆಧರಿಸಿ ಪೊಲೀಸರು ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಮಹಜರು ವೇಳೆ ಸಂಗ್ರಹಿಸಿದ ಸಾಕ್ಷ್ಯಗಳು ಮುಂದಿನ ತನಿಖೆಗೆ ಪ್ರಮುಖವಾಗಲಿವೆ.




