Connect with us

ಇತ್ತೀಚಿನ ಸುದ್ದಿಗಳು

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಆ.1ರಂದು ರಜೆ ಘೋಷಣೆ

Published

on

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಆಗಸ್ಟ್‌ 1ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ನದಿ, ಹಳ್ಳ, ತಗ್ಗು ಪ್ರದೇಶ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ 0824-2442590 ಸಂಪರ್ಕಿಸುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

 

 
 

Continue Reading
Click to comment

Leave a Reply

Your email address will not be published. Required fields are marked *

Advertisement