Connect with us

ರಾಜಕೀಯ

ಪುತ್ತೂರು ಬಿಜೆಪಿಯಲ್ಲಿ ಬಿಗ್ ಅಪ್ಡೇಟ್…. ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಕುಮಾರ್ ಪ್ರಭು ನೇಮಕ

Published

on

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು.ಆರ್. ಪ್ರಾಪರ್ಟೀಸ್ ನ ಮಾಲಕ, ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ಸಂಚಾಲಕರಾಗಿರುವ ಉದ್ಯಮಿ ಉಜ್ವಲ್ ಪ್ರಭು ನೇಮಕಗೊಂಡಿರುವುದಾಗಿ ತಿಳಿದುಬಂದಿದೆ.

ಇಂದು(ಜು.31) ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ತಿಳಿದು ಬಂದಿದೆ. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ವರ್ತಕ ಸಮುದಾಯದ ಸಮಸ್ಯೆಗಳನ್ನು ಪಕ್ಷದ ಮುಂದೆ ಪರಿಣಾಮಕಾರಿಯಾಗಿ ಮಂಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಬಿಜೆಪಿ ಪುತ್ತೂರು ನಗರ ಘಟಕದ ಪದಾಧಿಕಾರಿಗಳು ತಿಳಿಸಿದ್ದಾರೆ. ಉಜ್ವಲ್ ಕುಮಾ‌ರ್ ಪ್ರಭು ಅವರು ದೀರ್ಘಕಾಲದಿಂದ ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವರ್ತಕ ಸಮುದಾಯದೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಅವರ ನಾಯಕತ್ವದಲ್ಲಿ ಪುತ್ತೂರು ವ್ಯಾಪಾರಿ ವರ್ಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವರ್ತಕ ಪ್ರಕೋಷ್ಠವು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಹುದ್ದೆಗೆ ಆಸೆ ಪಟ್ಟವನಲ್ಲ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದೆ. ಪಕ್ಷ ನನ್ನನ್ನು ಗುರುತಿಸಿ ಈ ಜವಾಬ್ದಾರಿ ನೀಡಿದ್ದು, ಇದನ್ನು ಉತ್ತಮವಾಗಿ ನಿಭಾಯಿಸುತ್ತೇನೆ. ಪುತ್ತೂರಿನ ವರ್ತಕರ ಎಲ್ಲಾ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಇಡುವ ಜೊತೆಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವರ್ತಕ ಪರ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

 

 
 

Continue Reading
Click to comment

Leave a Reply

Your email address will not be published. Required fields are marked *

Advertisement