Published
14 hours agoon
By
Akkare News

ಮತ್ತೊಂದೆಡೆ, ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನ ಪಯ್ಯನಿತೋಟಂನಲ್ಲಿ ಭೂಕುಸಿತ ಉಂಟಾಗಿ ಜೋಸೆಫ್ ಎಂಬ ಯುವಕ ಮೃತಪಟ್ಟಿದ್ದು, ಆತನ ತಾಯಿಗಾಗಿ ಎನ್‌ಡಿಆರ್‌ಎಫ್ (NDRF) ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಹೆದ್ದಾರಿ ಬಂದ್, ನದಿಗಳು ಉಕ್ಕಿ ಹರಿವು: ಪುಲ್ಲಕಾಯರ್ ಹಾಗೂ ಪಂಪಾ ನದಿಗಳಲ್ಲಿ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದ್ದು, ಕೊಕ್ಕಾಯರ್‌ನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 183ರ ಮೇಲೆ ನೀರು ನಿಂತು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಟ್ಟಪ್ಪನ-ವಝವಾರ ರಸ್ತೆಯಲ್ಲೂ ಭೂಕುಸಿತದಿಂದಾಗಿ ಸಂಚಾರ ಅಡಚಣೆಯಾಗಿದೆ.
8 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ: ಪಥನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ 8 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ‘ರೆಡ್ ಅಲರ್ಟ್’ ಪ್ರಕಟಿಸಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಅಪಾಯಕಾರಿ ಪ್ರದೇಶದ ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ




