Published
9 hours agoon
By
Akkare News

ಭಾನುವಾರವೂ ಜಿಲ್ಲೆಗೆ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಮುನ್ನೆಚ್ಚರಿಕೆಯಾಗಿ ಮುಂದಿನ ಐದು ದಿನಗಳ ಕಾಲ ಮೀನುಗಾರರು ಯಾವುದೇ ಕಾರಣಕ್ಕೂ ಬೋಟ್‌ಗಳನ್ನು ಸಮುದ್ರಕ್ಕೆ ಇಳಿಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.ನೇತ್ರಾವತಿ, ಫಲ್ಗುಣಿ ಉಗ್ರರೂಪ: ಸೇತುವೆಗಳು ಜಲಾವೃತದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಹಗಲು-ರಾತ್ರಿ ಎನ್ನದೆ ಸುರಿಯುತ್ತಿರುವ ಅಬ್ಬರದ ಮಳೆಗೆ ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ. ಫಲ್ಗುಣಿ ಮತ್ತು ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ತೀರ ಪ್ರದೇಶದ ಕೃಷಿ ಭೂಮಿಯನ್ನು ನುಂಗಿ ನೀರು ಹಾಕುತ್ತಿವೆ. ಸವಣಾಲು ಮತ್ತು ಮಲ್ಲರೋಡಿ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇತ್ತ ಮುಂಡಾಜೆ ಹಾಗೂ ಧರ್ಮಸ್ಥಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಮಧ್ಯೆ ಭಾರಿ ಗುಡ್ಡ ಕುಸಿತ ಸಂಭವಿಸಿದ್ದು, ಎಲ್ಲೆಂದರಲ್ಲಿ ಮಣ್ಣು ಜರಿದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.




