Connect with us

ಇತರ

ಭಾರಿ ಮಳೆ ಅಬ್ಬರ: ಬೈತಡ್ಕ ನದಿ ಉಕ್ಕಿ ಹರಿದು – ಅಡಿಕೆ ತೋಟಗಳಿಗೆ ನುಗ್ಗಿದ ಪ್ರವಾಹದ ನೀರು

Published

on

ಆಗಸ್ಟ್‌ 1ರಂದು ಬೆಳಿಗ್ಗೆಯಿಂದ ಸುರಿದ ಧಾರಾಕಾರ ಮಳೆಯಿಂದ ಕುಮಾರದಾರ ನದಿಗೆ ಸೇರುವ ಬೈತಡ್ಕ ನದಿ ಉಕ್ಕಿ ಹರಿದಿದೆ. ಕಾಪೆಜಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಡಿಕೆ ತೋಟಗಳಿಗೆ ಪ್ರವಾಹದ ನೀರು ನುಗ್ಗಿದೆ. ಪ್ರವಾಹದ ನೀರು ತೋಟಗಳನ್ನು ಆವರಿಸಿರುವುದರಿಂದ ಅಡಿಕೆ ಬೆಳೆಗಾರರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಮಳೆ ಇದೇ ರೀತಿ ಮುಂದುವರಿದರೆ ಕೃಷಿ ಬೆಳೆಗಳಿಗೆ ಹೆಚ್ಚಿನ ಹಾನಿಯಾಗುವ ಸಾಧ್ಯತೆ ಇದೆ. ಸ್ಥಳೀಯ ಆಡಳಿತ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version