Published
1 hour agoon
By
Akkare News

ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೂವರ ಮೃತದೇಹಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಪಕ್ಕದ ಶೆಡ್ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಮರಾಜೇಂದ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.




