ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಬೆಂಗಳೂರನ್ನು ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರೊಂದಿಗೆ ʻತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಅಭಿಯಾನದಡಿ ಕಟ್ಟಡ ನಿರ್ಮಾಣ ತ್ಯಾಜ್ಯ, ಘನ ತ್ಯಾಜ್ಯ, ಹಳೆಯ ವಿದ್ಯುತ್ ಕಂಬಗಳು, ಪೈಪ್‌ಗಳು, ಮಣ್ಣಿನ ಗುಡ್ಡೆಗಳು, ಬೆಳೆದು ನಿಂತ ಕಳೆಗಿಡಗಳು ಹಾಗೂ ಮರದ ಕೊಂಬೆಗಳು ಸೇರಿದಂತೆ ಒಟ್ಟು 22,372 ಟನ್‌ಗಳಷ್ಟು ತ್ಯಾಜ್ಯವನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ. ಬೆಂಗಳೂರು ನಗರದ ಪ್ರಮುಖ ರಸ್ತೆಗಳು, ಮೇಲ್ಸೇತುವೆಗಳು, ಪಾದಚಾರಿ ಮಾರ್ಗಗಳು ಹಾಗೂ ಸಾರ್ವಜನಿಕ ಸ್ಥಳಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ ನಗರದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ. ಸಾರ್ವಜನಿಕರ ಸಹಕಾರದೊಂದಿಗೆ ತ್ಯಾಜ್ಯ ಮುಕ್ತ ಬೆಂಗಳೂರನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ. ಈ ವೇಳೆ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಎಸ್.ಆರ್ ವಿಶ್ವನಾಥ್ ಹಾಗೂ ಶ್ರೀ ಎ.ಸಿ ಶ್ರೀನಿವಾಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.