Connect with us

ಇತರ

ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ನಾಳೆ ನಿಗದಿಯಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಮುಂದೂಡಿಕೆ

Published

on

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ಆ.3ರಂದು ನಡೆಯಬೇಕಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

 

ಪೂರ್ವಾಹ್ನ 9.30ಕ್ಕೆ ಶಾಲಾ ವಠಾರದಲ್ಲಿರುವ ಮಹಾತ್ಮ ಗಾಂಧಿ ವೇದಿಕೆಯಲ್ಲಿ ಕವಿತಾ ದಿನಕರ ಪುತ್ತೂರು ಬಳಗದವರಿಂದ ದೇಶಭಕ್ತಿಗೀತೆ ಗಾಯನ ಹಾಗೂ ಇದೇ ವೇಳೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಗಾಂಧೀಜಿಯವರ ಪ್ರತಿಮೆ ಅನಾವರಣ ನಡೆಸಲು ನಿರ್ಧರಿಸಲಾಗಿತ್ತು. ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಮತ್ತಿತರರನ್ನು ಆಹ್ವಾನಿಸಲಾಗಿದ್ದು ಸಿದ್ಧತೆ ಪೂರ್ಣಗೊಂಡಿತ್ತು. ಆದರೆ ಭಾರೀ ಮಳೆಯಾಗುತ್ತಿರುವ ಕಾರಣ ರೆಡ್ ಅಲರ್ಟ್ ಜಾರಿಯಲ್ಲಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ. ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಕಾಶ್ ಗೌಡ ನೆಕ್ಕಿಲಾಡಿ ತಿಳಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version